ಸದೃಢ ಸಮಾಜಕ್ಕೆ ಹೆಣ್ಣು ಮಕ್ಕಳು ಅಗತ್ಯ:ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಸದೃಢ ಸಮಾಜಕ್ಕೆ ಹೆಣ್ಣು ಮಕ್ಕಳ ಸಬಲೀಕರಣ ಅಗತ್ಯವಾಗಿದ್ದು, ಅವರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಶುಕ್ರವಾರ, ಮಕ್ಕಳ ಸಹಾಯವಾಣಿ 1098, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರಿನ ಸ್ತ್ರೀ ಸೇವಾ ನಿಕೇತನದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಸಮಾನವಾಗಿ ನೋಡಿ, ಸಮಾಜದಲ್ಲಿ ಸಮಾನ ಸ್ಥಾನಮಾನ […]