ಮುಂದಿನ ವರ್ಷ ಜನವರಿಯಲ್ಲಿ ಸೇನಾ ನೇಮಕಾತಿ ರ್ಯಾಲಿ: ಜಿಲ್ಲಾಧಿಕಾರಿ

ಉಡುಪಿ ಮಾ.16: ಜಿಲ್ಲೆಯಲ್ಲಿ ಏಪ್ರಿಲ್ 4 ರಿಂದ 14 ರವರೆಗೆ ನಡೆಯಬೇಕಾಗಿದ್ದ ಸೇನಾ ನೇಮಕಾತಿ ರ್ಯಾಲಿಯನ್ನು ಮುಂಜಾಗರೂಕತಾ ಕ್ರಮವಾಗಿ ಮುಂದೂಡಲಾಗಿದ್ದು, ಮುಂದಿನ ವರ್ಷ ಜನವರಿಯಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೇನಾ ನೇಮಕಾತಿ ರ್ಯಾಲಿಯ ಪೂರ್ವಭಾವಿ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಸೇನಾ ನೇಮಕಾತಿಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಫೆಬ್ರವರಿ 16 ರಿಂದ ಮಾರ್ಚ್ 20 ರ ವರೆಗೆ ಅವಕಾಶ ನೀಡಲಾಗಿತ್ತು. ಇದುವರೆಗೂ 31500 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಮುಂದಿನ […]