ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾ ಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಹುದ್ದೆಗೆ 2014ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಕೆ ಅವರನ್ನು ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದೆ.