ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಪಟಾಕಿ ಮಳಿಗೆ ತೆರೆಯಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು […]

ಕಾಪು: ಅ.16 ರಂದು ಜನತಾ ದರ್ಶನ ಕಾರ್ಯಕ್ರಮ

ಕಾಪು: ಅ.16 ರಂದು ಬೆಳಿಗ್ಗೆ 10 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾಪು ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಮತ್ತು ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಅಥವಾ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.  

ಇಸ್ರೇಲ್ ದೇಶದಲ್ಲಿರುವ ನಾಗರಿಕರ ಮಾಹಿತಿಗಾಗಿ ಕಂಟ್ರೋಲ್ ರೂಂ ಸಂಪರ್ಕಿಸಿ

ಉಡುಪಿ: ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077 ಹಾಗೂ 0820- 2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದ್ರಧನುಷ್ ಲಸಿಕಾ ಕಾರ್ಯಕ್ರಮದಲ್ಲಿ ಶೇ.100 ಪ್ರಗತಿ ಸಾಧನೆ ಗುರಿ: ಡಾ.ವಿದ್ಯಾಕುಮಾರಿ ಕೆ.

ಉಡುಪಿ: ಇಂದ್ರಧನುಷ್ ಅಭಿಯಾನದಡಿ ನೀಡುತ್ತಿರುವ ಲಸಿಕಾಕರಣಗಳಿಂದ ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ. ಮೊದಲನೇ ಹಂತದಲ್ಲಿ 3,212 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಿದ್ದು, 3,203 ಮಕ್ಕಳಿಗೆ ಲಸಿಕೆ ನೀಡಿ, ಶೇ. 99.72 ರಷ್ಟು, 708 ಗರ್ಭಿಣಿ ಮಹಿಳೆಯರಿಗೆ ಲಸಿಕೆ ನೀಡಲು ಗುರಿ ಹೊಂದಿ 708 ಜನರಿಗೂ ಲಸಿಕೆ ನೀಡಿ ಶೇ. 100 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ […]

ಮಣಿಪಾಲ: ಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಜುಲೈ 17 ರಂದು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಮಾರಂಭವನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಇಂತಹ ಅದ್ಭುತ ಕೊಡುಗೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿ ಲೆಫ್ಟಿನೆಂಟ್ […]