ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿದ್ಯಾಕುಮಾರಿ ಅವರಿಗೆ ಸ್ವಾಗತ

ಉಡುಪಿ: ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಸ್ವಾಗತಿಸಿ ಗೌರವಿಸಲಾಯಿತು. ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಅಪರ ಜಿಲ್ಲಾಧಿಕಾರಿ ಶ್ರೀಮತಿ ವೀಣಾ, ಕನ್ನಡ ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ ರಾವ್, ಭುವನಪ್ರಸಾದ ಹೆಗ್ಡೆ, ರಾಮಾಂಜಿ ಉಪಸಿತರಿದ್ದರು. ಈ ಸಂದರ್ಭದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸಹಕಾರ ಕೋರಲಾಯಿತು.

ಕುಡಿಯುವ ನೀರಿನ ಪೂರೈಕೆಗೆ ಪರ್ಯಾಯ ಮೂಲಗಳನ್ನು ಶೋಧಿಸಲು ಜಿಲ್ಲಾಧಿಕಾರಿ ಸೂಚನೆ

ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, […]

ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂ.18: ಪ್ರಸಕ್ತ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಇಂದು, ಮಳೆಗಾಲದಲ್ಲಿ ಹರಡುವು ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ಸಂಬoದಪಟ್ಟ ಎಲ್ಲಾ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಪ್ರಸ್ತುತ 11 […]