ಅನ್‌ಲಾಕ್ ಸಮಯದಲ್ಲಿ ನಿರ್ದಿಷ್ಟಪಡಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ

ಉಡುಪಿ ಜೂ.11: ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿoದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಅನ್‌ಲಾಕ್ ಸಮಯದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಸಮರ್ಪಕ ಅನುಷ್ಠಾನ ಮಾಡುವ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ […]