ಅಂತರ್ಜಲ ಮಟ್ಟವು ಶೇ. 24 ರಷ್ಟು ಕುಸಿತ; ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ: ಡಾ. ವಿದ್ಯಾಕುಮಾರಿ ಕೆ.
ಉಡುಪಿ: ಜಿಲ್ಲೆಯಾದ್ಯಂತ ಮುಂಬರುವ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಬಂದಿರುವ ಹಿನ್ನೆಲೆ, ಅಂತರ್ಜಲ ಮಟ್ಟವು ಶೇ. 24 ರಷ್ಟು ಕುಸಿದಿದೆ. ಇದರಿಂದ […]