ಯಾವ ಹುದ್ದೆಯಲ್ಲಿದ್ದರೂ ಉಡುಪಿ ಜಿಲ್ಲೆಗೆ ಅಗತ್ಯವಿರುವ ಎಲ್ಲ ಸಹಕಾರಕ್ಕೆ ಬದ್ದ: ಕೂರ್ಮಾರಾವ್ ಎಂ

ಉಡುಪಿ: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಅತ್ಯುತ್ತಮ ಮತ್ತು ಮರೆಯಲಾಗದ ಅನುಭವ ನೀಡಿದೆ, ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ ಸಹಕಾರ ನೀಡುವ ಪ್ರಯತ್ನ ಮಾಡುತ್ತೇನೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಜಿಲ್ಲೆಯನ್ನು ರಾಜ್ಯದಲ್ಲೇ ಸದಾ ಮಾದರಿ ಜಿಲ್ಲೆಯನ್ನಾಗಿ ಮಾಡುವ ತುಡಿತ ಉಡುಪಿಯ ಸಾರ್ವಜನಿಕರು ಮತ್ತು ನೌಕರರ […]