ಡಿಸಿಎಂ ಹುದ್ದೆ ಹೆಚ್ಚಳದ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ: ಕಾರಜೋಳ

ಉಡುಪಿ: ಡಿಸಿಎಂ ಹುದ್ದೆ ಹೆಚ್ಚಳದ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಹೊರಗಡೆ ಚರ್ಚೆ ಆಗುತ್ತಿದೆ ಅಷ್ಟೇ. ಅಲ್ಲದೆ, ಈ ಸಂಬಂಧ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. ಅವರು ಉಡುಪಿ ಕೃಷ್ಣಮಠಕ್ಕೆ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಡಿಯೂರಪ್ಪನವರು ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದರು. ಉಪ ಚುನಾವಣೆಯಲ್ಲಿ ಗೆದ್ದ […]