ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸ್ಥಬ್ದಚಿತ್ರಗಳ ಮೆರವಣಿಗೆ: ಡಿಸಿ ಹೆಪ್ಸಿಬಾ

ಉಡುಪಿ, ಜುಲೈ 29: ಆಗಸ್ಟ್ 15 ರಂದು ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ, ಜನಜಾಗೃತಿ ಮೂಡಿಸುವ ವಿವಿಧ ಸ್ಥಬ್ದಚಿತ್ರಗಳನ್ನು ತಯಾರಿಸಿ, ನಗರದ ವಿವಿದೆಡೆಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿಯ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ, ಮಳೆ ನೀರು ಕೊಯ್ಲು ಕುರಿತು ಮಹತ್ವ […]