ರಾಜ್ಯದಲ್ಲೇ ಪ್ರಥಮ: ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ “ಆರೋಗ್ಯ ಶನಿವಾರ”; ಉಡುಪಿ ಶಿಕ್ಷಣ ಇಲಾಖೆಯ ನಿನೂತನ ಕಾರ್ಯ

ಮಲೇರಿಯಾ, ಡೆಂಗ್ಯೂ, ಜ್ವರ, ನೆಗಡಿ ಕಾಯಿಲೆಗಳು ಯಾವಾಗ ಬರುತ್ತವೆ, ಈ ರೋಗಗಳು ಏಕೆ ಬರುತ್ತವೆ, ಯಾವುದರಿಂದ ಬರುತ್ತದೆ, ಅವುಗಳ ಲಕ್ಷಣಗಳೇನು, ಈ ರೋಗಗಳು ಬಾರದಂತೆ ಏನು ಮಾಡಬೇಕು, ನಮ್ಮ ಆರೋಗ್ಯವನ್ನು ಸುರಕ್ಷಿತವಾಗಿ ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಈ ಎಲ್ಲಾ ವಿಷಯಗಳ ಬಗ್ಗೆ ಶಾಲಾ ಮಕ್ಕಳಿಗೆ ನಿರಂತರವಾಗಿ ತಿಳಿಸುವ ವಿನೂತನ ಮತ್ತು ಬಹುಶ: ರಾಜ್ಯದಲ್ಲೇ ಪ್ರಥಮವಾದ “ಆರೋಗ್ಯ ಶನಿವಾರ” ಎಂಬ ಕಾರ್ಯಕ್ರಮ ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಲಾಗಿದ್ದು, ಇದರಿಂದ ಉತ್ತಮ ಫಲಿತಾಂಶ ಕಂಡು ಬರುತ್ತಿದೆ. ಉಡುಪಿ […]

ಮೂಲಭೂತ ಸೌಕರ್ಯದ ಕೊರತೆ: ಉಭಯ ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಶೂನ್ಯ ದಾಖಲಾತಿ

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳು 2023-24ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿಗೆ ‘ಶೂನ್ಯ ಪ್ರವೇಶಾತಿ’ ದಾಖಲಿಸಿವೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಾರ ಉಭಯ ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಯಾವುದೇ ವಿದ್ಯಾರ್ಥಿ ದಾಖಲಾಗಿಲ್ಲ. ಪುತ್ತೂರು ತಾಲೂಕಿನ ಎರಡು, ಬಂಟ್ವಾಳದ ನಾಲ್ಕು, ಬೆಳ್ತಂಗಡಿಯಲ್ಲಿ ಮೂರು, ಮಂಗಳೂರು ಉತ್ತರದಲ್ಲಿ ಎರಡು, ಮಂಗಳೂರು ದಕ್ಷಿಣದಲ್ಲಿ ಎರಡು, ಮೂಡುಬಿದಿರೆಯಲ್ಲಿ ಮೂರು ಮತ್ತು ಸುಳ್ಯ ತಾಲೂಕಿನ ಎಂಟು ಶಾಲೆ ಸೇರಿ ದಕ್ಷಿಣ […]

ವಿದ್ಯಾರ್ಥಿಗಳ ಕೊರತೆ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆ ಮುಚ್ಚಲು ಆದೇಶ

ಉಡುಪಿ: ಮಕ್ಕಳ ಸಂಖ್ಯೆ ಕೊರತೆಯ ಕಾರಣದಿಂದ ಉಡುಪಿ ವಲಯದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢಶಾಲೆಯನ್ನು ಕಾರ್ಯಸಾಧುವಲ್ಲದ ಶಾಲೆಯೆಂದು ಸರ್ಕಾರ ಘೋಷಿಸಿದ್ದು, ಪ್ರಸಕ್ತ ಸಾಲಿನಿಂದ ಶಾಲೆಯ ಮಾನ್ಯತೆ ಹಿಂಪಡೆದು, ಶಾಲೆ ಮುಚ್ಚಲು ಆದೇಶಿಸಲಾಗಿರುತ್ತದೆ. ಆದ್ದರಿಂದ ಪ್ರಸಕ್ತ ಸಾಲಿನಿಂದ ಈ ಶಾಲೆಗೆ ಮಕ್ಕಳನ್ನು ದಾಖಲಾತಿ ಮಾಡಿದ್ದಲ್ಲಿ ಸಂಬಂಧಪಟ್ಟ ಪೋಷಕರೇ ಜವಾಬ್ದಾರರಾಗಿರುತ್ತಾರೆ ಎಂದು ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಿ: ಡಾ. ವಿಶಾಲ್

ಉಡುಪಿ: ಶಾಲಾ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್, ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ […]

5 ನೇ ಮತ್ತು 8 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಮುಂದಿನ ತರಗತಿಗೆ ಬಡ್ತಿ ಇಲ್ಲ: ಶಿಕ್ಷಣ ಇಲಾಖೆ 

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ 5 ನೇ ತರಗತಿ ಮತ್ತು 8 ನೇ ತರಗತಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಿದೆ ಎಂದು ಕರ್ನಾಟಕ ಸರ್ಕಾರವು ಇತ್ತೀಚೆಗೆ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. 5ನೇ ತರಗತಿ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ನೋ ಡಿಟೆನ್ಷನ್ ನೀತಿಯನ್ನು ತೆಗೆದುಹಾಕುವುದಾಗಿಯೂ ಅದು ಹೇಳಿದೆ. ಈ ನೀತಿಯ ಪ್ರಕಾರ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಬಡ್ತಿ ಪಡೆಯಲು ತಮ್ಮ ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕಾಗಿದೆ. ಹೊಸ ಮಾರ್ಗಸೂಚಿಗಳ ಜೊತೆಗೆ ಮುಂಬರುವ ವಾರ್ಷಿಕ […]