ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಅಭಿವೃದ್ಧಿಗೆ ಒಡಂಬಡಿಕೆ
ಉಡುಪಿ: ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡುವೆ ರಾಜ್ಯದಲ್ಲೇ ಮೊದಲ ಬಾರಿಗೆ ಒಡಂಬಡಿಕೆ ನಡೆಯಿತು. ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ […]
ಮಂಗಳೂರು: ಶಾಲಾ ಮಕ್ಕಳಲ್ಲಿ ಕೆಂಗಣ್ಣಿನ ಸಮಸ್ಯೆ; ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೆಂಗಣ್ಣಿನ ಸಮಸ್ಯೆ ಉತ್ತುಂಗದಲ್ಲಿದ್ದು, ಶೇ 40 ರಷ್ಟು ಶಾಲಾ ಮಕ್ಕಳಲ್ಲಿ ಕೆಂಗಣ್ಣಿನ ಸಮಸ್ಯೆಯ ಬಗ್ಗೆ ವರದಿಯಾಗಿದೆ. ಈ ಬಗ್ಗೆ ದ.ಕ ಜಿಲ್ಲೆಯ ಆಯೋಗ್ಯ ಇಲಾಖೆಯು ಜ್ಞಾಪನಾ ಪತ್ರವನ್ನು ಹೊರಡಿಸಿದ್ದು, ಕಾಯಿಲೆಗೆ ಒಳಗಾದ ಮಕ್ಕಳನ್ನು ಐದು ದಿನಗಳವರೆಗೆ ಶಾಲೆಗೆ ಕಳುಹಿಸದಂತೆ ಸೂಚನೆ ನೀಡಿದೆ. ಕೆಂಗಣ್ಣು ಒಬ್ಬರಿಂದ ಮತ್ತೊಬ್ಬರಿಗೆ ಶೀಘ್ರವಾಗಿ ಹರಡುವ ರೋಗವಾಗಿದ್ದು, ಸಾಮಾನ್ಯವಾಗಿ 3 ರಿಂದ 5 ದಿನಗಳಲ್ಲಿ ಗುಣಮುಖವಾಗುತ್ತದೆ. ಮಕ್ಕಳ ಪೋಷಕರು ಕೆಂಗಣ್ಣಿನ ಸಮಸ್ಯೆ ಬಗ್ಗೆ ಶಾಲೆಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. […]
ಅ. 6 ರಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇರ ನೇಮಕಾತಿಗಾಗಿ ದಾಖಲೆಗಳ ಪರಿಶೀಲನೆ
ಉಡುಪಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇರ ನೇಮಕಾತಿಗೆ ಸಂಬಂಧಿಸಿದಂತೆ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು schooleducation.kar.nic.in ನಲ್ಲಿ ಪ್ರಕಟಿಸಲಾಗಿರುತ್ತದೆ. ಸದರಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು, ಮಣಿಪಾಲದ ರಜತಾದ್ರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿನ ಸಮಾಜ ವಿಷಯದ 1 ರಿಂದ 40 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಅಕ್ಟೋಬರ್ 6 ರಂದು ಬೆಳಗ್ಗೆ ಹಾಗೂ 41 ರಿಂದ 100 […]
ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಬ್ರಹ್ಮಾವರ ಬೋರ್ಡ್ ಹೈಸ್ಕೂಲ್ ಗೆ ಪ್ರಥಮ ಸ್ಥಾನ
ಬ್ರಹ್ಮಾವರ: ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಸ.ಪ.ಪೂ.ಕಾಲೇಜು (ಬೋರ್ಡ್ ಹೈಸ್ಕೂಲ್) ಬ್ರಹ್ಮಾವರದ ವಿದ್ಯಾರ್ಥಿಗಳು ಅಭಿನಯಿಸಿದ, ರೋಹಿತ್ ಎಸ್ ಬೈಕಾಡಿ ನಿರ್ದೇಶನದ ‘ಸಾಂಕ್ರಾಮಿಕ ಅವಾಂತರ’ ನಾಟಕ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಉತ್ತಮ ನಾಟಕ ರಚನೆಕಾರ ಪ್ರಶಸ್ತಿ ಶಿಕ್ಷಕ ವರದರಾಜ್ ಬಿರ್ತಿಗೆ ಲಭ್ಯವಾಗಿದೆ. ವಿಭಾಗೀಯ ಮಟ್ಟದ ಸ್ಪರ್ಧೆ ಹಾಸನದಲ್ಲಿ ನಡೆಯಲಿದೆ.
ಮಣಿಪಾಲ: ಎಂಐಟಿ ವತಿಯಿಂದ ಅಕ್ಷಯ ಉರ್ಜಾ ದಿವಸ್ ಕಾರ್ಯಾಗಾರ
ಮಣಿಪಾಲ: ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ (ಎಂ.ಐ.ಟಿ) ಆಗಸ್ಟ್ 20 ರಂದು ಅಕ್ಷಯ ಉರ್ಜಾ ದಿವಸ್ ಅನ್ನು ಆಚರಿಸಲಾಯಿತು. ಉಡುಪಿ ಮತ್ತು ಬ್ರಹ್ಮಾವರದ ಸರ್ಕಾರಿ ಶಾಲೆಗಳ 400 ವಿದ್ಯಾರ್ಥಿಗಳಿಗೆ ಸೌರಶಕ್ತಿ ಮತ್ತು ಹವಾಮಾನ ಬದಲಾವಣೆಯ ಭೀಕರ ಪರಿಣಾಮಗಳ ಕುರಿತು ಕಾರ್ಯಾಗಾರದ ಮೂಲಕ ಅರಿವು ಮೂಡಿಸಲಾಯಿತು. ಕಾರ್ಯಾಗಾರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸೋಲಾರ್ ಲ್ಯಾಂಪ್ಗಳನ್ನು ಜೋಡಿಸಲು ತರಬೇತಿ ನೀಡಲಾಯಿತು. ಆ ಬಳಿಕ ಈ ಸೋಲಾರ್ ಲ್ಯಾಂಪ್ಗಳನ್ನು ಶಾಲಾ ಶಿಕ್ಷಕರ ಸಹಿತ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ […]