ಅಸ್ಥಿಪಂಜರವಾಗಿ ಪತ್ತೆಯಾದ 9 ತಿಂಗಳ ಹಿಂದೆ ನಾಪತ್ತೆಯಾದವ! ಸಾವಿನ ಸುತ್ತ ಸಂಶಯದ ಹುತ್ತ?

ಪೆರ್ಡೂರು: 9 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಪೆರ್ಡೂರು ಗ್ರಾಮದ ಪಕ್ಕಾಲು ಜಯಲಕ್ಷ್ಮೀ ಮನೆ ನಿವಾಸಿ 30 ವರ್ಷದ ನಾಗರಾಜ ಆಚಾರ್ಯ ಎಂಬವರ ಮೃತದೇಹವು ಅಸ್ಥಿಪಂಜರದ ಸ್ಥಿತಿಯಲ್ಲಿ‌ ಮನೆಯ ಸಮೀಪದ ಚೌಂಡಿ ನಗರದ ಕೇಶವ ಹೆಗ್ಡೆ ಅವರ ಹಾಡಿಯಲ್ಲಿ ಮೇ.7ರಂದು ಸಂಜೆ ಪತ್ತೆಯಾಗಿದೆ. ನಾಗರಾಜ ಆಚಾರ್ಯ 2021ರ ಆಗಸ್ಟ್ 11ರ ಬೆಳಿಗ್ಗೆ 8.30ರಿಂದ ಮನೆಯಿಂದ ಕಾಣೆಯಾಗಿದ್ದರು. ಮನೆಯವರು ಸಾಕಷ್ಟು ಹುಡುಕಾಡಿದರೂ ನಾಗರಾಜ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ನಿನ್ನೆ ಸಂಜೆ ಮೃತನ ಸಹೋದರ […]