ಡಿ.21ರಿಂದ 27: ಮೂಡಬಿದಿರೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್‌ ಅಂತಾರಾಷ್ಟ್ರೀಯ ಜಾಂಬೂರಿ, ಇಲ್ಲಿದೆ ಆಮಂತ್ರಣ

ಮಂಗಳೂರು: ನಾಳೆಯಿಂದ ಒಂದು ವಾರಗಳ ಕಾಲ (ಡಿಸೆಂಬರ್‌ 21ರಿಂದ 27) ಮೂಡಬಿದಿರೆಯ ಆಳ್ವಾಸ್‌ ಆವರಣದಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ನಡೆಯಲಿದೆ. ನಾಳೆ ಅಲ್ಲಿನ ವಿವಿಧ ವೇದಿಕೆಗಳಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ಈ ಜಾಂಬೂರಿಯಲ್ಲಿ 50,000 ಸ್ಕೌಟ್ಸ್ ಹಾಗೂ ಗೈಡ್ ಗಳು ಸೇರಿದಂತೆ ಒಟ್ಟು 63,000 ಮಂದಿ ಭಾಗವಹಿಸಲಿದ್ದಾರೆ. 10 ದೇಶಗಳಿಂದ 10,000 ಮಂದಿ ತರಬೇತಿ ನೀಡುವವರು ಹಾಗೂ 3,000 ಮಂದಿ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ದೇಶದಲ್ಲಿ ಇಂತಹ ಕಾರ್ಯಕ್ರಮ ನಡೆಯುವುದು ಇದೇ ಮೊದಲು […]