ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಸಮರ್ಪಿತ ಬದುಕು ಪ್ರತಿಯೊಬ್ಬ ಕಾರ್ಯಕರ್ತರಿಗೆ ಪ್ರೇರಣೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದಯಾಳ್ ಉಪಾಧ್ಯಾಯರವರ ಬಲಿದಾನ ದಿನವನ್ನು ಸಮರ್ಪಣಾ ದಿನವನ್ನಾಗಿ ಫೆ.11ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಯಿಲಾಡಿ, ದೇಶ ಸೇವೆಗೆ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟು ಇಂದಿಗೂ ಕಾರ್ಯಕರ್ತರಿಗೆ ಸ್ಫೂರ್ತಿ ಹಾಗೂ ಪ್ರೇರಣಾ ಶಕ್ತಿಯಾಗಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರು ಅಜರಾಮರ. ಪಂಡಿತ್ ಜೀ ಅವರ ಜೀವನಾದರ್ಶ, ನಡೆದು ಬಂದ […]