ಕ್ರಿಕೆಟ್ ಆಟಗಾರ ರಿಷಭ್ ಪಂತ್ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ: ಕಾರಿನಲ್ಲಿ ಬೆಂಕಿ; ಗಂಭೀರ ಗಾಯ
ರೂರ್ಕಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಷಬ್ ಅವರನ್ನು ಮೊದಲು ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪಂತ್ ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅವರು […]
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8 ನೇ ತರಗತಿ ಸೇರ್ಪಡೆಗೆ ಪ್ರವೇಶ ಪರೀಕ್ಷೆಯು ಡಿಸೆಂಬರ್ 3 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ, 2023 ಜುಲೈ 1 ಕ್ಕೆ 11 1/2 ರಿಂದ 13 ವರ್ಷ ತುಂಬಿರುವ ಬಾಲಕ ಹಾಗೂ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಎಸ್.ಸಿ.ಎಸ್.ಟಿ ಅಭ್ಯರ್ಥಿಗಳು […]