ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ಸಿದ್ದರಾಮಯ್ಯ ಅವರು ಮರದಲ್ಲಿ ತಯಾರಿಸಿದ ಆನೆಯ ವಿಗ್ರಹ ಮತ್ತು ಹಾರವನ್ನು ಪ್ರಧಾನಿ ಮೋದಿ ಅವರಿಗೆ ನೀಡಿದರು. ಪಿಎಂಒ ಟ್ವೀಟ್ ಮಾಡಿರುವ ಚಿತ್ರದಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಸಾಂಪ್ರದಾಯಿಕ ಪೇಟ ಮತ್ತು ಶಾಲನ್ನು ತೊಟ್ಟಿದ್ದಾರೆ. ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ […]

ಭೋಪಾಲ್-ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್ ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ನವದೆಹಲಿ: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಒಂದು ಕೋಚ್‌ನಲ್ಲಿನ ಬ್ಯಾಟರಿ ಬಾಕ್ಸ್‌ ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಆದರೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಮಧ್ಯಪ್ರದೇಶದ ಕುರ್ವೈ ಕೆಥೋರಾ ನಿಲ್ದಾಣದಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರೈಲು ಬೆಳಿಗ್ಗೆ 5.40 ರ ಸುಮಾರಿಗೆ ಭೋಪಾಲ್‌ನಿಂದ ಹೊರಟು ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣವನ್ನು ಮಧ್ಯಾಹ್ನ 1.10 ರ ಸುಮಾರಿಗೆ ತಲುಪುತ್ತದೆ. ಸ್ಥಳದ ದೃಶ್ಯಗಳು ಚಕ್ರಗಳ ಬಳಿಯಿಂದ ಹೊಗೆ ಹೊರಹೊಮ್ಮುವುದನ್ನು […]

ದೆಹಲಿ: ಬಂದೂಕು ತೋರಿಸಿ ದಂಪತಿಯನ್ನು ದರೋಡೆ ಮಾಡಲು ಬಂದವರೆ 100 ರೂ. ಕೊಟ್ಟು ಪರಾರಿ!!

ನವದೆಹಲಿ: ವಿಲಕ್ಷಣ ಘಟನೆಯೊಂದರಲ್ಲಿ, ಬಂದೂಕು ತೋರಿಸಿ ದಂಪತಿಯನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿದ್ದ ದೆಹಲಿಯ ಇಬ್ಬರು ದರೋಡೆಕೋರರು ಸ್ವತಃ ತಾವೇ ದಂಪತಿಗಳಿಗೆ 100 ರೂಪಾಯಿಗಳನ್ನು ನೀಡಿ ಅವರಿಗೆ ಯಾವುದೇ ಹಾನಿ ಮಾಡದೆ ಸ್ಥಳದಿಂದ ನಿರ್ಗಮಿಸಿದ್ದಾರೆ. ಜೂನ್ 21 ರಂದು ಪೂರ್ವ ದೆಹಲಿಯ ಶಾಹದಾರದ ಫಾರ್ಶ್ ಬಜಾರ್ ಪ್ರದೇಶದಲ್ಲಿ ಈ ದರೋಡೆಕೋರರು ಮತ್ತು ಅವರ ದರೋಡೆಯ ಯತ್ನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಇಬ್ಬರು ವ್ಯಕ್ತಿಗಳು ಹೆಲ್ಮೆಟ್ ಧರಿಸಿ ದಂಪತಿಯ ಬಳಿ ತಮ್ಮ ದ್ವಿಚಕ್ರ ವಾಹನವನ್ನು ನಿಲ್ಲಿಸುವುದನ್ನು ದೃಶ್ಯಾವಳಿ ತೋರಿಸುತ್ತದೆ. […]

ದೆಹಲಿ ಸರ್ಕಾರ ವರ್ಸಸ್ ಲೆಫ್ಟಿನೆಂಟ್ ಗವರ್ನರ್‌: ಕೇಂದ್ರ ಸರ್ಕಾರದಿಂದ ಸುಗ್ರೀವಾಜ್ಞೆ; ಶಾಶ್ವತ ಪ್ರಾಧಿಕಾರ ಅಸ್ತಿತ್ವಕ್ಕೆ

ನವದೆಹಲಿ: ವರ್ಗಾವಣೆ ಪೋಸ್ಟಿಂಗ್, ವಿಜಿಲೆನ್ಸ್ ಮತ್ತು ಇತರ ಪ್ರಾಸಂಗಿಕ ವಿಷಯಗಳಿಗೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಶಿಫಾರಸುಗಳನ್ನು ಮಾಡಲು ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ನ್ಯಾಶನಲ್ ಕ್ಯಾಪಿಟಲ್ ಸರ್ವಿಸ್ ಅಥಾರಿಟಿ ಅನ್ನು ಸ್ಥಾಪಿಸಿದೆ. ಕಳೆದ ವಾರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಸೇರಿದಂತೆ ಸೇವಾ ವಿಷಯಗಳಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್‌ ಅವರ ಅಧಿಕಾರವನ್ನು ಕಸಿದುಕೊಂಡು ದೆಹಲಿ ಸರ್ಕಾರಕ್ಕೆ ಕಾರ್ಯನಿರ್ವಾಹಕ ಅಧಿಕಾರವನ್ನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ […]

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ಖರ್ಚು! ಕೊರೋನಾ ಸಂಕಷ್ಟ ಕಾಲದಲ್ಲಿ ದುಂದುವೆಚ್ಚ?

ಹೊಸದಿಲ್ಲಿ: ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಬಿಜೆಪಿ ಮಂಗಳವಾರ ಹೇಳಿಕೊಂಡಿದ್ದು, ‘ನೈತಿಕ’ ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ವರದಿಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ವಸತಿ ಗೃಹದ ನವೀಕರಣಕ್ಕೆ ರೂ 44.78 ಕೋಟಿ ಖರ್ಚು ಮಾಡಲಾಗಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಆಮ್ಲಜನಕ ಟ್ಯಾಂಕರ್‌ಗಳನ್ನು ಖರೀದಿಸಲು ಹಣವಿಲ್ಲ ಎಂದಿದ್ದ ದೆಹಲಿ ಎಎಪಿ ಸರ್ಕಾರವು ತಲಾ 5 ಲಕ್ಷ ರೂಪಾಯಿ ಮೌಲ್ಯದ […]