ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ಅರವಿಂದ್ ಕೇಜ್ರಿವಾಲ್ ನಕಾರ

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ ಕೇಜ್ರಿವಾಲ್ ಇಡಿಗೆ ಪತ್ರ ಬರೆದಿದ್ದು, ತನಿಖಾ ಸಂಸ್ಥೆಯು ವಿಚಾರಣೆಗೆ ಕರೆದಿರುವ ತನ್ನ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಕರೆಸಿತ್ತು. […]