ವಿಜಯನಗರದಲ್ಲಿ ಶಂಕಿತ ಡೆಂಗ್ಯೂಗೆ ಶಾಲಾ ಬಾಲಕಿ ಬಲಿ
ವಿಜಯನಗರ : ವಿಜಯನಗರದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.ಶಾಲಾ ಬಾಲಕಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.ಮೃತ ಜಾಹ್ನವಿಯ ತಂದೆ ತಿರುಮಲೇಶ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ನಗರದ ಟಿ.ಬಿ. ಡ್ಯಾಂನ ವಂಕಾಯಿ ಕ್ಯಾಂಪ್‌ನಲ್ಲಿ ಇವರು ವಾಸವಾಗಿದ್ದರು. ಕಳೆದ ಒಂದು ವಾರದಿಂದ ಬಾಲಕಿಗೆ ಜ್ವರ ಕಾಣಿಸಿಕೊಂಡಿದೆ. ವೈರಲ್ ಫೀವರ್ ಎಂದು ಹೊಸಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಿದ್ದಾರೆ. ಬಳಿಕ ಜ್ವರ ಕಡಿಮೆಯಾಗದ ಹಿನ್ನೆಲೆ […]