ಹಿರಿಯಡಕ: ಉಚಿತ ದಂತ ಚಿಕಿತ್ಸಾ ಶಿಬಿರ
ಉಡುಪಿ, ಜುಲೈ 1: ಲಯನ್ಸ್ ಕ್ಲಬ್ ಹಾಗೂ ಮಣಿಪಾಲದ ಕೆ.ಎಂ.ಸಿ. ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರವು ಇತ್ತೀಚೆಗೆ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಸೆಕೆಂಡ್ ವೈಸ್ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ವಿಶ್ವನಾಥ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಉಚಿತ ದಂತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನದಾಸ್ ಆಚಾರ್ಯ ಮಾತನಾಡಿ, ಲಯನ್ ಕ್ಲಬ್ ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೇವೆ, ಸ್ನೇಹ, ನಾಯಕತ್ವ ಅದರ ಮೂಲತತ್ತ್ವಗಳಾಗಿವೆ […]