ಸಚಿವ ಅಂಗಾರ ನೇತೃತ್ವದಲ್ಲಿ ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌದದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ಗುರುವಾರದಂದು ಸುಧೀರ್ಘ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಳಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಯಾಂತ್ರಿಕ ದೋಣಿಗಳ ಬೇಡಿಕೆ ಇದ್ದು, 2022-23 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಅರ್ಜಿ ಸಲ್ಲಿಸಿದ ಮೀನುಗಾರರಿಗೆ ಹಣ ಮಂಜೂರು ಮಾಡಬೇಕೆಂಬ ಪ್ರಸ್ತಾಪದ ಬಗ್ಗೆ ಉತ್ತರಿಸಿದ ಸಚಿವ ಅಂಗಾರ, ಇಲಾಖೆಯ […]

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: 2024-25 ರ ಅಂತ್ಯದ ವೇಳೆಗೆ 68 ಲಕ್ಷ ಉದ್ಯೋಗ ಸೃಜನೆ

ನವದೆಹಲಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯು ಶನಿವಾರದಂದು ತನ್ನ ಎರಡನೇ ವಾರ್ಷಿಕೋತ್ಸವವನ್ನು ಪೂರ್ಣಗೊಳಿಸಿದೆ. 2024-25ರ ಅಂತ್ಯದ ವೇಳೆಗೆ ಈ ಯೋಜನೆಯು 68 ಲಕ್ಷ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ಅಂದಾಜಿಸಲಾಗಿದೆ. ಮೀನುಗಾರಿಕೆ ವಲಯವು 2019-20 ರಿಂದ 2021-22 ರವರೆಗೆ 14.3 ಶೇಕಡಾದಷ್ಟು ಪ್ರಭಾವಶಾಲಿ ಬೆಳವಣಿಗೆಯನ್ನು ತೋರಿಸಿದೆ. 2021-22ರಲ್ಲಿ ಮೀನಿನ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ 161.87 ಲಕ್ಷ ಟನ್‌ಗಳನ್ನು ತಲುಪಿದೆ. ಮುಖ್ಯವಾಗಿ ಸಿಗಡಿ ರಫ್ತು ಪ್ರಾಬಲ್ಯ ಹೊಂದಿರುವ ಈ ವಲಯವು 57 ಸಾವಿರದ 587 ಕೋಟಿ ರೂಪಾಯಿಗಳ ಮೊತ್ತದ […]