ಕೊಲ್ಲೂರು: ಜನವರಿ 6 ರಿಂದ 8 ರ ಕರ್ನಾಟಕ ಹಕ್ಕಿ ಹಬ್ಬ

ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮವು ಜನವರಿ 6 ರಿಂದ 8 ರ ವರೆಗೆ ಕೊಲ್ಲೂರಿನ ಹಲ್ಕಲ್‌ನಲ್ಲಿ ನಡೆಯಲಿದೆ. ಜ. 6 ರಂದು ಬೆಳಗ್ಗೆ 11 ಗಂಟೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು […]

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಗಳ ತೆರವು: ನವೆಂಬರ್ 7 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಬೆಳ್ತಂಗಡಿ ತಾಲೂಕು ಸುಬ್ರಹ್ಮಣ್ಯ ರಸ್ತೆ ರಾಜ್ಯ ಹೆದ್ದಾರಿ 17 ರ ಗುರುವಾಯನಕೆರೆ ಶಕ್ತಿನಗರದಿಂದ ಪಿಲ್ಯ ವರೆಗೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 314 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ನವೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಅಳದಂಗಡಿ ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ […]