ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಕರಕುಶಲಕರ್ಮಿಗಳಿಗೆ ಸಾಲ-ಸಹಾಯಧನ ಲಭ್ಯ
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ರೂ. ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ಸಾಲದ ಮೇಲೆ ಇಲಾಖೆ ವತಿಯಿಂದ ಶೇ. 30 ರಷ್ಟು ಗರಿಷ್ಠ 15,000 ರೂ. ವರೆಗೆ ಸಹಾಯಧನ ನೀಡಲಾಗುವುದು. ಜಿಲ್ಲೆಯ 18 ವರ್ಷ ಮೇಲ್ಪಟ್ಟ ಕಮ್ಮಾರಿಕೆ, ಮರಗೆಲಸ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), […]
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ನಿವೃತ್ತ ಅಪರ ನಿರ್ದೇಶಕ ರಮಾನಂದ ನಾಯಕ್ ರವರಿಗೆ ಗೌರವಾರ್ಪಣೆ
ಉಡುಪಿ: ಸೇವಾ ನಿವೃತ್ತಿ ಹೊಂದಿದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ ಮತ್ತು ಟೆಕ್ಸೋಕ್ ಕರ್ನಾಟಕ ಸರ್ಕಾರ ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮಾನಂದ ನಾಯಕ್ ರವರಿಗೆ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ಉಡುಪಿ ಶಾಖೆಯ ಮಾಜಿ ಅಧ್ಯಕ್ಷ ಸಿಎ ನರಸಿಂಹ ನಾಯಕ್ ರವರು ಇತ್ತೀಚೆಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್ ನಾಯಕ್ ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.