ವರನಟ ಡಾ. ರಾಜ್‌ಕುಮಾರ್ ಜಯಂತಿ ಕಾರ್ಯಕ್ರಮ
ಉಡುಪಿ: ವರನಟ ಡಾ. ರಾಜ್‌ಕುಮಾರ್ ಜಯಂತಿ ಕಾರ್ಯಕ್ರಮವನ್ನು ಸೋಮವಾರ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ವಾರ್ತಾಧಿಕಾರಿ ಮಂಜುನಾಥ್.ಬಿ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ತಾ ಸಹಾಯಕ ಶಿವಕುಮಾರ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ.ಜಾ/ಪ.ಪ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 […]
ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ […]