ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ: ಶಾಸಕರಿಂದ ಪೂರ್ವತಯಾರಿ ನಿರೀಕ್ಷಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಶಾಸಕ ಕೆ. ರಘುಪತಿ ಭಟ್ ಮಂಗಳವಾರ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪೂರ್ವ ತಯಾರಿಯ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಿ.ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ನಾರಾಯಣ್ […]

ಡಿಸೆಂಬರ್ 11 ರಂದು ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ಸಾಧನೆಯನ್ನು ಮಾಡಿರುವ ಶಾಲೆ, ಕಾಲೇಜುಗಳನ್ನು ಗುರುತಿಸಿ, ಗೌರವಿಸುವ ಸಾಧಕ ಶಾಲೆ ಮತ್ತು ಸಾಧಕ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮವು ಡಿಸೆಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದ್ದು, ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಪರ್ಯಾಯ ಮಠಾಧೀಶರು ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಸಾಧಕ ಶಾಲೆ ಪ್ರಶಸ್ತಿ- ಪದವಿಪೂರ್ವ ಕಾಲೇಜು […]

ಕೋಟಿ ಚೆನ್ನಯ್ಯ ಥೀಂ ಪಾರ್ಕಿನಲ್ಲಿ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ

ಉಡುಪಿ: ಕಾರ್ಕಳ ತಾಲೂಕಿನ ಕೋಟಿ ಚೆನ್ನಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ರಚನೆಯ ನಂತರ ಪ್ರತಿ ತಿಂಗಳು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೂಚಿಸಿದ ಹಿನ್ನೆಲೆ, ನವೆಂಬರ್ 26 ರಂದು ಸಂಜೆ 5.30 ಕ್ಕೆ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಸಿದ್ಧ ಕಲಾವಿದರಿಂದ ರಾಮ ನಿರ್ಯಾಣ ಎಂಬ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನಡೆಯಲಿದೆ. ಸಮಿತಿಯ ಹಿರಿಯ ಸದಸ್ಯ ಭಾಸ್ಕರ್ ಎಸ್.ಕೋಟ್ಯಾನ್, ಕನ್ನಡ ಮತ್ತು ಸಂಸ್ಕೃತಿ […]

ಗುಡ್ಡ ಪಾಣಾರ ಮತ್ತು ಎಂ.ಎ.ನಾಯಕ್ ರವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಕೆ

ಉಡುಪಿ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ದೈವ ನರ್ತಕರಾದ ಗುಡ್ಡ ಪಾಣಾರ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಎ.ನಾಯಕ್ ಆಯ್ಕೆಯಾಗಿದ್ದು, ಇವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾರವರು ಸಾಧಕರ ನಿವಾಸಕ್ಕೆ ತೆರಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅಭಿನಂದಿಸಿದರು.