ಆಶ್ರಮದಲ್ಲಿ ಬೆಳೆದ ಹೆಣ್ಣಿಗೆ ಆಸರೆಯಾದ ಜಿಲ್ಲಾಡಳಿತ: ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ವಿಧಿ ಪೂರೈಸಿದ ಶಾಸಕ

ಉಡುಪಿ: ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಗಳು ಜನಪರವಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯಗಳನ್ನು ಕೈಗೊಂಡಾಗ ಜನರ ಮೆಚ್ಚುಗೆಗೆ ಸಹಜವಾಗಿಯೇ ಪಾತ್ರರಾಗುತ್ತಾರೆ. ಜಿಲ್ಲೆಯ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತವು ಇಂತಹದ್ದೇ ಒಂದು ಕಾರ್ಯವನ್ನು ಕೈಗೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ಬೆಳೆದ ಅನಾಥ ಹುಡುಗಿ ಜಯಶ್ರೀ (ವಿಜಯಶ್ರೀ)ಎಂಬವರನ್ನು ಮಲ್ಲೇಶ ಡಿ.ಎಲ್. ಎಂಬವರೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿದ್ದು, ಅನಾಥ ಹೆಣ್ಣುಮಗಳಿಗೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಆಸರೆಯಾಗಿದ್ದಾರೆ. ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ […]

ಬಾಲಕ- ಬಾಲಕಿಯರಿಗಾಗಿ ಹೊಯ್ಸಳ- ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ […]

ಆಗಸ್ಟ್ 15 ರಂದು ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಗಸ್ಟ್ 15 ರಂದು ಅಪರಾಹ್ನ 2 ಗಂಟೆಗೆ 5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಚಿತ್ರಕಲೆ, ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಜಿಲ್ಲಾ ಬಾಲಭವನ ಬ್ರಹ್ಮಗಿರಿಯಲ್ಲಿ ನಡೆಸಲಾಗುತ್ತಿದ್ದು ಆಸಕ್ತರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ: 0820-2574978 ಹಾಗೂ 0820-2574972 ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.