ಖಾಸಗಿ ಸಹಭಾಗಿತ್ವದ ಯೋಜನೆಯಿಂದ ಆರ್ಥಿಕ ಭದ್ರತೆ: ಡಾ. ಅಶ್ವಥ ನಾರಾಯಣ

ಉಡುಪಿ: ಸರ್ಕಾರವು ಖಾಸಗಿ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳುವ ಯೋಜನೆಗಳಿಂದ ಆರ್ಥಿಕ ಭದ್ರತೆಯನ್ನು ಬಲಿಷ್ಠಗೊಳಿಸುವುದರ ಜತೆಗೆ ದೇಶದಲ್ಲಿ ಮಹತ್ತರ ಬದಲಾವಣೆಗಳನ್ನು ತರಲು ಸಾಧ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ ಹೇಳಿದರು. ರಾಜ್ಯ ಸರ್ಕಾರ ಹಾಗೂ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ)ಯ ಸಹಭಾಗಿತ್ವದಲ್ಲಿ ಆರಂಭಿಸಿರುವ ಬಯೋ ಇನ್‌ಕ್ಯುಬೇಟರ್‌ ಕೇಂದ್ರವನ್ನು ಮಣಿಪಾಲದ ಫಾರ್ಚುನ್‌ ವ್ಯಾಲಿವ್ಯೂ ಹೋಟೆಲ್‌ನ ಚೈತನ್ಯ ಸಭಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ವಿಜ್ಞಾನ, ಮಾಹಿತಿ ತಂತ್ರಜ್ಞಾನ, ರಕ್ಷಣಾ ತಂತ್ರಜ್ಞಾನ ಮೊದಲಾದ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಸಂಶೋಧನೆ ಕೇಂದ್ರಗಳನ್ನು ರಾಜ್ಯದ […]