ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನುಟರ್ಮಿನಲ್ 2ರಲ್ಲಿ ತಾಂತ್ರಿಕ ಕಾರಣಗಳಿಂದ ಮುಂದೂಡಿಕೆ

ದೇವನಹಳ್ಳಿ : ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಮುಂದಿನ ಸೂಚನೆ ಪ್ರಕಟ ಆಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ […]