ಯುವ ಸಮುದಾಯದಿಂದ ದೇಶದ ಅಭಿವೃದ್ಧಿ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ

ಉಡುಪಿ, ಮಾ.7: ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಸಮುದಾಯ ಹಾಗೂ ಯುವಕ ಹಾಗೂ ಯುವತಿ ಮಂಡಲಗಳ ಪಾತ್ರ ಬಹು ಮುಖ್ಯವಾಗಿದ್ದು, ವಿವೇಕಾನಂದರ ನುಡಿಯಂತೆ ಯುವ ಜನತೆಯಿಂದ ಸದೃಢ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಇಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ, ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೂರ್ಣಪ್ರಜ್ಞ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಇನಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಾಗೂ ಉಡುಪಿ ಜಿಲ್ಲೆಯ ಯುವಕ, ಯುವತಿ […]