ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ನೂತನ ಸಭಾಭವನ ಹಾಗೂ ಗೋದಾಮು ಉದ್ಘಾಟನೆ

ಉಡುಪಿ: ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಂಪೂರ್ಣ ಹವಾನಿಯಂತ್ರಿತ ನೂತನ ಸಭಾಭವನ, ಆಡಳಿತ ಕಚೇರಿ ಮತ್ತು ಗೋದಾಮು ಕಟ್ಟಡವನ್ನು ದ‌.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಭಾನುವಾರದಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಅವರು ನೂತನ ನವೋದಯ ಸ್ವಸಹಾಯ ಗುಂಪುಗಳನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಚೈತನ್ಯ ವಿಮಾ ಪರಿಹಾರವನ್ನು ವಿತರಿಸಿ ಮಾತನಾಡಿ, ರಾಜ್ಯಗಳಿಗೆ ಸೀಮಿತವಾಗಿದ್ದ ಸಹಕಾರ ಕ್ಷೇತ್ರವನ್ನು ಕೇಂದ್ರೀಕೃತಗೊಳಿಸಲು ಉದ್ದೇಶಿಸಿರುವ ಕೇಂದ್ರ ಸರಕಾರದ ಚಿಂತನೆಯಂತೆ ಸಹಕಾರಿ ಕ್ಷೇತ್ರವನ್ನು ಕೇವಲ ಕೃಷಿ ಪತ್ತಿನ ಸಂಘಕ್ಕೆ […]