ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ನಿಗೂಢ ಸ್ಫೋಟ; ಭಯೋತ್ಪಾದಕ ಕೃತ್ಯವೆಂದ ಪೊಲೀಸ್ ಮಹಾನಿರ್ದೇಶಕ

ಮಂಗಳೂರು: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡ ಒಂದು ದಿನದ ನಂತರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಭಾನುವಾರ ‘ನಿಗೂಢ ಸ್ಫೋಟ’ ಭಯೋತ್ಪಾದಕ ಕೃತ್ಯವಾಗಿದ್ದು, ಘಟನೆಯ ಕುರಿತು “ಆಳವಾದ ತನಿಖೆ” ನಡೆಯುತ್ತಿದೆ ಎಂದು ಹೇಳಿದ್ದಾರೆ. ಅದು ಈಗ ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ ಆದರೆ ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಮಾಡಿದ ಭಯೋತ್ಪಾದಕ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಶನಿವಾರ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡಿದ್ದು, ಬೆಂಕಿ […]

ಸೂಕ್ತ ಕಾರಣವಿಲ್ಲದೆ ವಾಹನ ತಪಾಸಣೆ ನಡೆಸುವಂತಿಲ್ಲ: ಆದೇಶ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವೆಂದ ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ಸುಖಾಸುಮ್ಮನೆ ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮತ್ತು ಕಣ್ಣಿಗೆ ಕಾಣುವಂತಹ ಸಂಚಾರ ನಿಯಮ ಉಲ್ಲಂಘನೆ, ಅಪರಾಧ ಕಂಡುಬಂದ ಹೊರತಾಗಿ ಕೇವಲ ದಾಖಲೆಗಳ ಪರಿಶೀಲನೆಗಾಗಿ ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುವಂತಿಲ್ಲ. ಈ ಸೂಚನೆಗಳನ್ನು ಕೆಳ ಹಂತಕ್ಕೆ ತಲುಪಿಸಿ ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ  ಎಂದು ಸೂದ್ ಎಚ್ಚರಿಸಿದ್ದಾರೆ. […]