ಧಾರೇಶ್ವರ ಯಕ್ಷ ಬಳಗದ 8ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪ ಸಮಾರಂಭ

ಉಡುಪಿ: ಧಾರೇಶ್ವರ ಯಕ್ಷ ಬಳಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರಿನ ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಸೆ.18ರಿಂದ 24ರವರೆಗೆ ನಡೆದ 8ನೇ ವರ್ಷದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭವು ಶನಿವಾರದಂದು ನಡೆಯಿತು. ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಯಕ್ಷಗಾನ ಕಲಾರಂಗಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಕಲಾ ಸೇವೆ ಯಕ್ಷಗಾನ ರಂಗಕ್ಕೆ ಹಾಗೂ ಅಭಿಮಾನಿಗಳಿಗೆ ಇನ್ನಷ್ಟು ಕಾಲ ಸಿಗುವಂತಾಗಬೇಕು ಎಂದರು. […]