ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿ ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ನಿನ್ನೆ ರಾತ್ರಿ ಧರ್ಮಸ್ಥಳದಲ್ಲಿ ತಂಗಿದ್ದ ಅವರು ಇಂದು ಮುಂಜಾನೆ ದೇವಸ್ಥಾನಕ್ಕೆ ಭೇಟಿ ನೀಡಿದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸಿದ ಅವರಿಗೆ ಶಾಸಕ ಹರೀಶ್ […]
ಎಸ್.ಡಿ.ಎಂ ಆಯುರ್ವೇದ ಕಾಲೇಜಿನಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನ ಅದ್ದೂರಿ ಆಚರಣೆ
ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಮತ್ತು ಆಸ್ಪತ್ರೆಯಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಡಾ ಮಮತಾ ಕೆ.ವಿ ಮಾತನಾಡಿ, ಆಯುರ್ವೇದವೇ ಜೀವನದ ಸಂಸ್ಕೃತಿ ಮತ್ತು ಸಂಸ್ಕಾರವಾಗಿರಬೇಕು ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಮಾನವ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು ಸವಿಸ್ತಾರವಾಗಿ ವಿವರಿಸಿ ಮಾನವ ಪ್ರಕೃತಿ ಜೊತೆ ಸಹಬಾಳ್ವೆ ನಡೆಸಬೇಕು ಎಂದರು. ಈ ಸಂದರ್ಭದಲ್ಲಿ ಜನಪರ ವೈದ್ಯ ಸಂಶೋಧನಾ ಕೇಂದ್ರದ ವತಿಯಿಂದ […]