ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣ.

ಮಂಗಳೂರು: ಧರ್ಮಸ್ಥಳದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ಹೆತ್ತವರು ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ. 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆಗಮಿಸಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು […]