ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆ; ದೂರು ದಾಖಲು
ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳು ತನ್ನ ಮೈಗೆ ಕೈ ಹಾಕಿ ಮಾನಹಾನಿಗೆ ಯತ್ನಿಸಿದ್ದು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ (48) ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದು, ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ […]