ಬೆಳ್ತಂಗಡಿ: ಐದು ದಶಕಗಳಿಂದ ಸೇವೆ ಸಲ್ಲಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವೈಕ್ಯ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವರಾತ್ರಿಯಂದು ಶಿವ ಪಾದ ಸೇರಿದೆ. 60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ.
ಧರ್ಮಸ್ಥಳದಲ್ಲಿ ಆತ್ಮಹತ್ಯೆಗೆ ಶರಣಾದ ಬೆಂಗಳೂರಿನ ವೃದ್ಧ; ಮೃತದೇಹ ಪಡೆಯಲು ಮಕ್ಕಳ ಹಿಂದೇಟು
ಬೆಳ್ತಂಗಡಿ: ಮಕ್ಕಳ ಜೊತೆಗಿನ ಮುನಿಸಿನಿಂದ ಮನೆ ಬಿಟ್ಟು ಬಂದಿದ್ದ 89 ವರ್ಷದ ವೃದ್ಧರೊಬ್ಬರು ಧರ್ಮಸ್ಥಳದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ತಂದೆ ಮೃತ ಪಟ್ಟ ವಿಚಾರವನ್ನು ಪೊಲೀಸರ ಮೂಲಕ ಮಕ್ಕಳಿಗೆ ತಿಳಿಸಿಲಾಗಿದೆ. ಆದರೆ ತಂದೆಯ ಮೃತದೇಹವನ್ನು ಪಡೆದುಕೊಳ್ಳಲು ಮಕ್ಕಳು ನಿರಾಕರಿಸಿದ್ದಾರೆ. ಮೂಲತಃ ಬೆಂಗಳೂರಿನ ಹೊಯ್ಸಳ ನಗರದ ಸುಂಕದ ಕಟ್ಟೆ ನಿವಾಸಿಯಾಗಿರುವ ಹೆಚ್.ವಿ.ಚಂದ್ರ ಶೇಖರ್ ಧರ್ಮಸ್ಥಳಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡವರು. ಐವರು ಮಕ್ಕಳನ್ನು ಹೊಂದಿರುವ ಇವರು ಮನೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ […]
ಉಡುಪಿ: ನಾಳೆ (ಆ. 29) ಸೌಜನ್ಯ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನಾ ಸಭೆ
ಉಡುಪಿ: ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿ ಆಕೆಗೆ ನ್ಯಾಯ ಒದಗಿಸಲು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ಹೋರಾಟ ಸಮಿತಿ ಉಡುಪಿ ವತಿಯಿಂದ ಆ. 29 ರಂದು ಮಧ್ಯಾಹ್ನ 3 ಗಂಟೆಗೆ ಅಜ್ಜರಕಾಡಿನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಸೌಜನ್ಯ ಕುಟುಂಬ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಚಿಂತಕ ತಮ್ಮಣ್ಣ ಶೆಟ್ಟಿ ಭಾಗವಹಿಸಲಿದ್ದಾರೆ. ಪ್ರತಿಭಟನೆಗೂ ಮುನ್ನ ಕೃಷ್ಣ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆಯ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ಮೆರವಣಿಗೆ ನಡೆಯಲಿದೆ […]
ಕುಂದಾಪುರ: ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ; ಸಹಸ್ರಾರು ಜನ ಭಾಗಿ
ಕುಂದಾಪುರ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರರಣದ ಮರು ತನಿಖೆಗೆ ಆಗ್ರಹಿಸಿ ಕುಂದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸಾವಿರಾರು ಜನರು ಭಾಗವಹಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಜಸ್ಟಿಸ್ ಫಾರ್ ಸೌಜನ್ಯ ಎನ್ನುವ ಘೋಷಣೆಗಳನ್ನು ಕೂಗುತ್ತಾ ನೆಹರು ಮೈದಾನದಿಂದ ಹೊರಟು ಶಾಸ್ತ್ರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಳ ಕುಟುಂಬಿಕರು ಭಾಗವಹಿಸಿದರು.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ಒದಗಿಸಲು ಗೃಹ ಸಚಿವರಿಗೆ ಮನವಿ
ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಪಟ್ತು ಕೊಲೆಯಾದ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಗೌಡ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ ನೀಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದ ಬಂಗೇರ, ರಾಜ್ಯದಲ್ಲಿ ಸೌಜನ್ಯ ಪರ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ […]