ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪೋಸ್ಟ್ ಕಾರ್ಡ್ ಚಳುವಳಿ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಕು. ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು, ತನ್ಮೂಲಕ ನೈಜ ಅಪರಾಧಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ನಗರದ ವಿವಿಧ ಕಾಲೇಜು ಮತ್ತು ಹಾಸ್ಟೆಲ್ ಗಳಲ್ಲಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ಆರಂಭಿಸಲಾಯಿತು. ಪೋಸ್ಟ್ ಕಾರ್ಡ್ ನ ಮೂಲಕ ರಾಜ್ಯದ ಮುಖ್ಯಸ್ಥರಾದ ರಾಜ್ಯಪಾಲರಿಗೆ, ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳ ಮೂಲಕ ಮನವಿಯನ್ನು ಮಾಡಲಾಯಿತು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ […]

ಸೌಜನ್ಯಾ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ/ಉಡುಪಿ ಬಿಜೆಪಿ ಶಾಸಕರಿಂದ ಪ್ರತಿಭಟನೆ: ನಳಿನ್ ಕುಮಾರ್

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಆ. 27 ರಂದು ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಶಾಸಕರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸೌಜನ್ಯ ಪ್ರಕರಣ ಹಳಿ ತಪ್ಪಿಸಿದವರು ಯಾರೆಂದು ಬಲ್ಲೆ; ರಹಸ್ಯ ಬಿಚ್ಚಿಟ್ಟರೆ ಸಾಯಿಸಬಹುದು: ವಸಂತ ಬಂಗೇರ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು. ಆದರೆ ಆ ರಹಸ್ಯವನ್ನು ಸಾಯುವ ಮುನ್ನ ನಾನು ಹೇಳದೇ ಬಿಡುವುದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಳ್ತಂಗಡಿಯ ಸೌಜನ್ಯ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಲಾಗಿದ್ದು ಇದರ ಹಿಂದೆ ಇರುವವರು ಯಾರೆಂದು ನನಗೆ ಗೊತ್ತಿದೆ ಎಂದರು. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯಾ ಕೇಸ್ ಅನ್ನು ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರು ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ಅಧಿವೇಶನಕ್ಕೂ ಮುನ್ನ […]

ಬೆಳ್ತಂಗಡಿಗೆ ಬಂದಿಳಿಯಿತು ಬಾಂಗ್ಲಾ ವಿಮೋಚನೆಯಲ್ಲಿ ಹೋರಾಡಿದ T-55 ಟ್ಯಾಂಕ್ !

ಬೆಳ್ತಂಗಡಿ: ಧರ್ಮಸ್ಥಳದ ಪ್ರಸಿದ್ಧ ಮಂಜುಷಾ ವಸ್ತುಸಂಗ್ರಹಾಲಯದಲ್ಲಿ ಟಿ-55 ಯುದ್ಧ ಟ್ಯಾಂಕ್ ಇನ್ನು ಮುಂದೆ ಹೊಸ ಆಕರ್ಷಣೆಯಾಗಲಿದೆ. ಭಾರತದ ರಕ್ಷಣಾ ಸಚಿವಾಲಯವು ಮ್ಯೂಸಿಯಂಗೆ ಟ್ಯಾಂಕ್ ಅನ್ನು ಮಂಜೂರು ಮಾಡಿದ್ದು, ಪುಣೆಯ ಸೆಂಟ್ರಲ್ ಎ.ಎಫ್.ವಿ ಡಿಪೋದಿಂದ ಇದನ್ನು ನೀಡಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಮಂಗಳವಾರ ಬೆಳಗ್ಗೆ ಮ್ಯೂಸಿಯಂಗೆ ಆಗಮಿಸಿ ಯುದ್ದ ಟ್ಯಾಂಕ್ ಅನ್ನು ಪರಿಶೀಲಿಸಿದರು. ಸೋವಿಯತ್-ನಿರ್ಮಿತ T-55 ಟ್ಯಾಂಕ್‌ಗಳನ್ನು 1968 ರಲ್ಲಿ ಭಾರತೀಯ ಸೇನೆಗೆ ಸೇರಿಸಲಾಯಿತು ಮತ್ತು 1971 ರ ಭಾರತ-ಪಾಕ್ ಯುದ್ಧದಲ್ಲಿ (ಬಾಂಗ್ಲಾದೇಶ […]

ಸಮವಸರಣ ಪೂಜೆಯೊಂದಿಗೆ ಧರ್ಮಸ್ಥಳ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ತೆರೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಗುರುವಾರದಂದು ರಾತ್ರಿ ಬಸದಿಯಲ್ಲಿ ಭಗವಾನ್‌ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಮುಕ್ತಾಯವಾದವು. ಪಂಚನಮಸ್ಕಾರ ಮಂತ್ರ ಪಠಣದೊಂದಿಗೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ, ಭಗವಾನ್ ಶ್ರೀ ಬಾಹುಬಲಿ ಸ್ವಾಮಿ, ಶ್ರುತದೇವಿ ಹಾಗೂ ಗಣಧರ ಪರಮೇಷ್ಠಿಗಳ ಅಷ್ಟವಿಧಾರ್ಚನೆ ಪೂಜೆ ಸುಶ್ರಾವ್ಯ ಗಾಯನದೊಂದಿಗೆ ಸಂಪನ್ನಗೊಂಡಿತು. ಬಾಹುಬಲಿ ಸೇವಾ ಸಮಿತಿಯ ಶ್ರಾವಕರು, ಶ್ರಾವಕಿಯರಿಂದ ಸುಶ್ರಾವ್ಯವಾಗಿ ಭಕ್ತಿಗೀತೆಗಳ ಗಾಯನ ಪೂಜೆಗೆ ವಿಶೇಷ ಮೆರುಗನ್ನು ನೀಡಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಷಟ್ಕಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿಗ್ರಂಥವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. […]