ಆಗಸ್ಟ್1-15 ರ ವರೆಗೆ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ

ಉಡುಪಿ: 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ 15 ರ ವರೆಗೆ ರಾಷ್ಟ್ರೀಯ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 69,881 ಮಕ್ಕಳಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇವರ ಮನೆಗಳಿಗೆ ತೆರಳಿ ಓ.ಆರ್.ಎಸ್ ಪ್ಯಾಕೆಟ್ ವಿತರಣೆ ಮಾಡುವ ಮೂಲಕ ಇವುಗಳ ಬಳಕೆಯ ಕುರಿತು ಮಾಹಿತಿ ನೀಡಲಿದ್ದಾರೆ. ಆರೋಗ್ಯ ಸಂಸ್ಥೆಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ ಓ.ಆರ್.ಎಸ್ […]