ಕೇರಳದಲ್ಲಿ ಮತ್ತೊಂದು ಸಾಂಕ್ರಾಮಿಕ: ರಾಜ್ಯದಲ್ಲಿ ನೊರೊವೈರಸ್ ನ ಎರಡು ಪ್ರಕರಣಗಳು ದೃಢ

ತಿರುವನಂತಪುರಂ: ರೋಟವೈರಸ್‌ನಂತೆಯೇ ಅತಿಸಾರವನ್ನು ಉಂಟುಮಾಡುವ ನೊರೊವೈರಸ್ ಸೋಂಕು ಇಲ್ಲಿನ ಇಬ್ಬರು ಮಕ್ಕಳಲ್ಲಿ ದೃಢಪಟ್ಟಿದೆ ಎಂದು ಕೇರಳ ಸರ್ಕಾರ ಭಾನುವಾರ ತಿಳಿಸಿದೆ. ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ್ದು, ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ರೋಗವು ಹೆಚ್ಚು ಸಾಂಕ್ರಾಮಿಕವಾಗಿದ್ದು, ಜನರು ನೈರ್ಮಲ್ಯವನ್ನು ಕಾಪಾಡಿಕೊಳ್ಳುವಂತೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಒತ್ತಾಯಿಸಿದ್ದಾರೆ. ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, […]