ಮೀನುಗಾರರ ಮನೆಗೆ ಕೇಂದ್ರ ರಕ್ಷಣಾ ಸಚಿವೆ ಭೇಟಿ: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು

ಉಡುಪಿ: ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಜೊತೆ ನಿರ್ಮಲಾ ಸೀತಾರಾಮನ್ ಅವರು ಮಲ್ಪೆಯಲ್ಲಿರುವ ಮೀನುಗಾರರ ಮನೆಗೆ ಭೇಟಿ ಕೊಟ್ಟಾಗ ಬಂಧುಗಳ ಕಣ್ಣೀರ ಕಟ್ಟೆ ಒಡೆಯಿತು. ಮೂರು ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಮೀನುಗಾರರ ಹುಡುಕಾಟ ಇನ್ನೂ ನಡೆಯುತ್ತಲೇ ಇದೆ. ಕುಟುಂಬಸ್ಥರು ಇವತ್ತು ಬರ್ತಾರೆ ನಾಳೆ ಬರ್ತಾರೆ ಎಂದು ಕಾಯುತ್ತಲೇ ಇದ್ದಾರೆ. ಕಾಣೆಯಾದ ಚಂದ್ರಶೇಖರ, ದಾಮೋದರ ಅವರ ಮನೆಗಳಿಗೆ ಭೇಟಿ […]