ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಗಮ್ಯ ಸ್ಥಾನ ತಲುಪಿ! ಪರ್ಯಾಯಕ್ಕಾಗಿ ಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆ ಜಾರಿ!

ಉಡುಪಿ: ಪುತ್ತಿಗೆ ಮಠ ಪರ್ಯಾಯ ಸಂದರ್ಭದಲ್ಲಿ ವಿವಿಧೆಡೆಗಳಿಂದ ಆಗಮಿಸುವ ಭಕ್ತಾದಿಗಳು ಹಾಗೂ ನಾಗರಿಕರಿಗೆ ಸುಗಮ ಸಂಚಾರ ಮತ್ತು ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆ ಜಾರಿಗೊಳಿಸಿದೆ. ನೂತನ ಡಿಜಿಟಲ್ ಟ್ರಾಫಿಕ್ ಮತ್ತು ವಾಹನ ಪಾರ್ಕಿಂಗ್ ಮ್ಯಾನೇಜ್ ಮೆಂಟ್ ವ್ಯವಸ್ಥೆಯಲ್ಲಿ ಪರ್ಯಾಯ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ನಗರದ 25 ಕಡೆಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ಅಳವಡಿಸಲಾಗುತ್ತಿದ್ದು ಅದನ್ನು […]