ಡೆಂಗ್ಯೂ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ದಿನಕರ ಬಾಬು

ಉಡುಪಿ, ಜುಲೈ 26: ಡೆಂಗ್ಯೂ ನಿರ್ಮೂಲನೆಗೆ ಎಲ್ಲರೂ ಸ್ವ ಪ್ರೇರಣೆಯಿಂದ ಮುಂದೆ ಬಂದು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅವರು ಶುಕ್ರವಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಉಡುಪಿ, ಲಯನ್ಸ್ ಕ್ಷಬ್ ಬ್ರಹ್ಮಗಿರಿ ಉಡುಪಿ, ಪೂರ್ಣಪ್ರಜ್ಞ ಪದವಿ ಕಾಲೇಜು ಉಡುಪಿ, ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮಣಿಪಾಲ ಇವರ ಸಂಯುಕ್ತ […]

ಜನ ಸಂಖ್ಯಾ ನಿಯಂತ್ರಣದಲ್ಲಿ ಕೈಜೋಡಿಸಿ: ದಿನಕರ ಬಾಬು

ಉಡುಪಿ, ಜುಲೈ 11: ಮಹಿಳೆಯರು ಜನ ಜನಸಂಖ್ಯಾ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಿದರೆ ಕಾರ್ಯಕ್ರಮದ ಉದ್ದೇಶ ಉತ್ತಮ ಫಲಿತಾಂಶ ಪಡೆಯಬಹುದು. ಆರೋಗ್ಯ ಇಲಾಖೆಯಿಂದ ನಡೆಯುವ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಎಲ್ಲರೂ ತೊಡಗಿಸಿಕೊಂಡು ಜನ ಸಂಖ್ಯಾ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕರೆ ನೀಡಿದ್ದಾರೆ. ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಎನ್‍ಎಸ್‍ಎಸ್ ಘಟಕ ಡಾ. ಜಿ ಶಂಕರ್ ಸರಕಾರಿ ಮಹಿಳಾ […]

ಅಲೆವೂರಲ್ಲಿ‌ ಗ್ರಾಮೀಣ ಕ್ರೀಡಾಕೂಟ: ಗ್ರಾಮೀಣ ಸಂಪ್ರದಾಯ ತಿಳಿಯಲು ಕೆಸರ್ಡೊಂಜಿ ದಿನ ಸಹಕಾರಿ: ದಿನಕರ ಬಾಬು

ಉಡುಪಿ: ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಪ್ರಸ್ತುತ ಕೃಷಿಗೆ ಸಂಬಂಧಿಸಿದ ಗ್ರಾಮೀಣ ಕ್ರೀಡೆಗಳು ನಿಧಾನವಾಗಿ ಮರೆಯಾಗುತ್ತಿವೆ. ಅವುಗಳನ್ನು ಮತ್ತೆ ಮುನ್ನಾಲೆಗೆ ತರಲು ಇಂತಹ ಗ್ರಾಮೀಣ ಕ್ರೀಡಾಕೂಟಗಳು ಸಹಕಾರಿ. ಯುವ ಜನತೆಯನ್ನು ಕೃಷಿಯ ಕಡೆಗೆ ಸೆಳೆಯುವುದರ ಜತೆಗೆ ಅವರಿಗೆ ನಮ್ಮ ಸಂಪ್ರದಾಯ, ಸಂಸ್ಕೃತಿಗಳ ಪರಿಚಯ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಯುವಜನ ಸೇವೆ, ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಉಡುಪಿ ಜಿ.ಪಂ. ಸಂಯುಕ್ತ ಆಶ್ರಯದಲ್ಲಿ […]

ಎಸ್.ಎಸ್.ಎಲ್.ಸಿ ಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಯೋಜನೆ ರೂಪಿಸಿ: ದಿನಕರ ಬಾಬು

ಉಡುಪಿ, ಜೂನ್ 15: ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 5 ನೇ ಸ್ಥಾನ ಪಡೆದಿದ್ದು, ಮುಂದಿನ ಬಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ, ಈಗಿನಿಂದಲೇ ಯೋಜನೆ ರೂಪಿಸಿ, ಕಾರ್ಯೋನ್ಮುಖರಾಗುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ. ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಯೋಜನೆ ರೂಪಿಸುವಂತೆ ಸೂಚಿಸಿದ ಅಧ್ಯಕ್ಷ […]

ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಸ್ಥಾನ ಪಡೆಯಲು ಯತ್ನ: ದಿನಕರ ಬಾಬು

ಉಡುಪಿ, ಮೇ 31:  ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆನ್ನುವ ಉಡುಪಿ ಜಿಲ್ಲೆಯ ಅತಿಯಾದ ಆತ್ಮವಿಶ್ವಾಸ ಮತ್ತು ತಂತ್ರಗಾರಿಕೆಯನ್ನು ಬೇರೆ ಜಿಲ್ಲೆಯವರು ಅನುಕರಣೆ ಮಾಡಿದ್ದರಿಂದ ಜಿಲ್ಲೆಗೆ ಹಿನ್ನೆಡೆಯಾಗಿದ್ದು,  ರಾಜ್ಯದಲ್ಲಿ 5 ನೇ ಸ್ಥಾನ ಪಡೆಯುವಂತಾಗಿದೆ,   ಮುಂದಿನ ಸಾಲಿನಲ್ಲಿ ಬೇರೆ ರೀತಿಯ ವಿಭಿನ್ನ ತಂತ್ರಗಾರಿಕೆ ಹಾಗೂ ಮಕ್ಕಳಲ್ಲಿ ಕಲಿಯುವಿಕೆಯ ಬಗ್ಗೆ ಹೆಚ್ಚಿನ ಜಾಗೃತಿಯನ್ನು ವಹಿಸುವುದರ ಮೂಲಕ , ರಾಜ್ಯದಲ್ಲಿ ಮತ್ತೆ ಪ್ರಥಮ ಸ್ಥಾನ ಪಡೆಯುವಲ್ಲಿ ಎಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳು ಸಹಕರಿಸಬೇಕೆಂದು ಜಿಲ್ಲಾ […]