ಕೊಂಕಣ ರೈಲ್ವೆಯಲ್ಲಿ ಕಳ್ಳತನ: ಗಂಭೀರ ಪರಿಗಣನೆಗೆ ಕೇಂದ್ರ ಸಚಿವೆ ಸೂಚನೆ

ಉಡುಪಿ: ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್‍ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ […]

ಮೇ 7 ರಂದು ದಿಶಾ ಸಭೆ

ಉಡುಪಿ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಮೇ 7 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.