ಯುಪಿಎ ಆಡಳಿತದಲ್ಲಿ ಪ್ರಧಾನಿ ಮೋದಿಯವರನ್ನು ಬಂಧಿಸುವಂತೆ ಸಿಬಿಐ ಒತ್ತಡ ಹೇರಿದ್ದರೂ ಪಕ್ಷ ಗದ್ದಲ ಎಬ್ಬಿಸಿರಲಿಲ್ಲ: ಅಮಿತ್ ಶಾ
ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಜರಾತ್‌ನಲ್ಲಿ ನಡೆದ ತಥಾಕಥಿತ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ “ಸಿಲುಕಿಸುವಂತೆ” ತನಿಖಾ ಸಂಸ್ಥೆ ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ತನ್ನ ಮೇಲೆ “ಒತ್ತಡ” ಹೇರಿತ್ತು. ಆದಾಗ್ಯೂ, ನಾವ್ಯಾರೂ ಗದ್ದಲ ಎಬ್ಬಿಸಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ‘ನ್ಯೂಸ್ 18 ರೈಸಿಂಗ್ ಇಂಡಿಯಾ’ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಸರ್ಕಾರವು ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು “ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂಬ ಪ್ರತಿಪಕ್ಷಗಳ ಆರೋಪದ ಪ್ರಶ್ನೆಗೆ […]