ಬುಡಕಟ್ಟು ಜನಾಂಗದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಆರೋಗ್ಯ ಇಲಾಖೆ, ಬುಡಕಟ್ಟು ಸಮುದಾಯದ ಸಂಘಟನೆಗಳು ಉಡುಪಿ ಹಾಗೂ ಯೆನಪೋಯ ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲೆಯ ಬುಡಕಟ್ಟು ಜನಾಂಗದವರ ಆರೋಗ್ಯ ತಪಾಸಣೆ ನಡೆಸುವ ಸಲುವಾಗಿ ಮಾರ್ಚ್ 4 ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬೆಳಗ್ಗೆ 9 ರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 26 ರಂದು ಹೆಗ್ಗುಂಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂದಾರ್ತಿ, ಆವರ್ಸೆ, ಬಿಲ್ಲಾಡಿ, ಹೆಗ್ಗುಂಜೆ, ನಡೂರು ಮತ್ತು ಸೈಬ್ರಕಟ್ಟೆ ವ್ಯಾಪ್ತಿಯವರಿಗೆ, […]
ರಜತಾದ್ರಿ: 1947 ರ ಸ್ವಾತಂತ್ರ್ಯ ಸಂದರ್ಭದ ದೇಶ ವಿಭಜನೆಯ ಛಾಯಾಚಿತ್ರ ಪ್ರದರ್ಶನ
ಉಡುಪಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ, 1947 ರ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆ ಕುರಿತು ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎಸ್ ಇಂದು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಾರ್ತಾಧಿಕಾರಿ ಮಂಜುನಾಥ್ ಬಿ. ವಾರ್ತಾ ಸಹಾಯಕರಾದ ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]
ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಗುರುರಾಜ ಪೂಜಾರಿಗೆ ಅದ್ದೂರಿ ಸ್ವಾಗತ: ಜಿಲ್ಲಾಡಳಿತದಿಂದ ಸನ್ಮಾನ ಕಾರ್ಯಕ್ರಮ
ಉಡುಪಿ: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಂ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು, ಜಿಲ್ಲೆಗೆ ಆಗಮಿಸಿದ ಕುಂದಾಪುರದ ಗುರುರಾಜ ಪೂಜಾರಿ ಅವರನ್ನು ಇಂದು ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಜಿಲಾಧಿಕಾರಿ ಕೂರ್ಮಾರಾವ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಪೌರಾಯುಕ್ತ ಡಾ.ಉದಯ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ […]