ಡಿ. 29-30 ರಂದು ಉಡುಪಿ ಆಟೋ ಎಕ್ಸ್‌ಪೋ-2023: ಬನ್ನಿ ಭಾಗವಹಿಸಿ… ಚಿನ್ನ ಗೆಲ್ಲುವ ಅವಕಾಶ ಪಡೆಯಿರಿ….

ಉಡುಪಿ: ಜಿಲ್ಲಾ ಆಟೋಮೊಬೈಲ್‌ ಡೀಲರ್ ಅಸೋಸಿಯೇಶನ್‌ ಮತ್ತು ಉಡುಪಿ ಚೇಂಬರ್ ಆಫ್ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರೀಸ್‌ ಆಶ್ರಯದಲ್ಲಿ ಮಣಿಪಾಲ ಆಟೋ ಕ್ಲಬ್‌ ಸಹಕಾರದಲ್ಲಿ ಡಿ. 29 ಮತ್ತು 30ರಂದು ಬೆಳಗ್ಗೆ 8.30ರಿಂದ ರಾತ್ರಿ 8ರ ತನಕ ಎಂಜಿಎಂ ಕಾಲೇಜಿನ ಕ್ರೀಡಾಂಗಣದಲ್ಲಿ ‘ಉಡುಪಿ ಆಟೋ ಎಕ್ಸ್‌ಪೋ-2023’ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವಿವರ: ಡಿ. 29ರಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಎಕ್ಸ್‌ಪೋಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ‘ಭಾರತದಲ್ಲಿ ಆಟೋಮೋಬೈಲ್‌’ […]