ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸ್ ಸಮಸ್ಯೆ ಸರಿಪಡಿಸುವಂತೆ ರೋಗಿಗಳಿಂದ ಪ್ರತಿಭಟನೆ: ಶಾಸಕರಿಂದ ಸ್ಪಂದನೆ

ಉಡುಪಿ: ಸೋಮವಾರದಂದು ಜಿಲ್ಲಾಸ್ಪತೆಯ ವಠಾರದಲ್ಲಿ ಡಯಾಲಿಸ್ ಸಮಸ್ಯೆ ಸರಿಪಡಿಸುವಂತೆ ಕೋರಿ ರೋಗಿಗಳಿಂದ ಪ್ರತಿಭಟನೆ ನಡೆಯಿತು. ಆಸ್ಪತ್ರೆಯ ವಠಾರದಲ್ಲಿ ಜಮಾಯಿಸಿದ ರೋಗಿಗಳು ಸಮಸ್ಯೆಯನ್ನು ಸರಿಪಡಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಂಗ್ರೆಸ್ ಮುಖಂಡ ಕೆ ಕೃಷ್ಣಮೂರ್ತಿ ಆಚಾರ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಶೀಘ್ರವೇ ಪರಿಹರಿಸುವುದಾಗಿ ರೋಗಿಗಳಿಗೆ ಭರವಸೆ ನೀಡಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ […]

ಜಿಲ್ಲಾಧಿಕಾರಿ ಕೂರ್ಮಾ ರಾವ್ ಜಿಲ್ಲಾಸ್ಪತ್ರೆ ಭೇಟಿ: ಕೋವಿಡ್ ಸಿದ್ದತೆ ಪರಿಶೀಲನೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿರ್ವಹಣೆ ಕುರಿತಂತೆ ಪೂರ್ವಬಾವಿಯಾಗಿ ಕೈಗೊಂಡಿರುವ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಬುಧವಾರ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಆಕ್ಸಿಜಿನ್ ಘಟಕಗಳ ಕಾರ್ಯನಿರ್ವಹಣೆ, ಪೂರೈಕೆ, ವೆಂಟಿಲೇಟರ್ ಗಳ ಸುಸ್ಥಿತಿ ಹಾಗೂ ಕೋವಿಡ್ ಪರೀಕ್ಷಾ ಲ್ಯಾಬ್‍ನ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.

ಹೈಕೋರ್ಟ್ ನ್ಯಾಯಾಧೀಶ ನ್ಯಾ.ವೀರಪ್ಪರವರಿಂದ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತ ಭೇಟಿ: ಆಸ್ಪತ್ರೆಯ ಮೂಲ ಸೌಕರ್ಯಗಳ ಪರಿಶೀಲನೆ

ಉಡುಪಿ: ಶನಿವಾರದಂದು ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ವೀರಪ್ಪರವರು ಉಡುಪಿ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳನ್ನು ವಿಚಾರಿಸಿ, ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗಳು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ ಆತ್ಮವಿಶ್ವಾಸ ಮೂಡಿಸುವುದರ ಮೂಲಕ ಅವರು ಶೀಘ್ರದಲ್ಲಿ ಚೇತರಿಸಿಕೊಳ್ಳುವಂತೆ ಪ್ರೇರೆಪಿಸಬೇಕು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ ಉತ್ತಮ ಚಿಕಿತ್ಸೆ ನೀಡುವುದು ಮಾತ್ರವಲ್ಲದೇ, ವಾರದಲ್ಲಿ ಒಂದು ದಿನ ಆಸ್ಪತ್ರೆಯ ಎಲ್ಲಾ […]