ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭ

ಉಡುಪಿ, ಮಾ.14: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಆಶಾ ಪ್ರಶಸ್ತಿ ಪ್ರಧಾನ ಸಮಾರಂಭವು ಮಾರ್ಚ್ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಅಧ್ಯಕ್ಷತೆ ವಹಿಸಲಿದ್ದಾರೆ.