ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡಾಸ್ಫೂರ್ತಿಯನ್ನು ತುಂಬುವುದು ಅಗತ್ಯ: ಶಾಸಕ ಕೆ.ರಘಪತಿ ಭಟ್
ಉಡುಪಿ: ವಿದ್ಯಾರ್ಥಿ ದೆಸೆಯಲ್ಲಿ ಕ್ರೀಡಾಸ್ಫೂರ್ತಿಯನ್ನು ತುಂಬುವುದು ಅಗತ್ಯ. ಹೊಸತನದ ಚಿಂತನೆಯೊಂದಿಗೆ, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪದವಿಪೂರ್ವ ವಿಭಾಗದಲ್ಲಿ ನಡೆಯುತ್ತಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ದಾಖಲಾಗುವ ಕೂಟ ದಾಖಲೆಯನ್ನು ಸಮತೂಕವಾಗಿ ದಾಖಲಿಸುವ ನಿಟ್ಟಿನಲ್ಲಿ ಫೋಟೋ ಫಿನಿಶಿಂಗ್ ಬಳಸುತ್ತಿರುವುದು ಅಭಿನಂದನಾರ್ಹ ಎಂದು ಶಾಸಕ ಕೆ.ರಘಪತಿ ಭಟ್ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಸರ್ಕಾರ ಪದವಿಪೂರ್ವ ಶಿಕ್ಷಣ ಇಲಾಖೆ, ರಜತ್ರಾದಿ,ಮಣಿಪಾಲ, ಉಡುಪಿ, ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿ ಇಲ್ಲಿ ಆಯೋಜಿಸಿದ್ದ […]