ಜಿಲ್ಲಾ ಮಲೆಕುಡಿಯ ಸಂಘ: ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

ಉಡುಪಿ: ಜಿಲ್ಲಾ ಮಲೆ ಕುಡಿಯ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ, ವಿಶೇಷ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಪ್ರಥಮ ತ್ರೈಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರ ಅಧ್ಯಕ್ಷತೆಯಲ್ಲಿ ಇಂದು ಪೇರಡ್ಕದಲ್ಲಿರುವ ಸಂಘದ ಕಛೇರಿಯಲ್ಲಿ ಜರಗಿತು. ನಿಕಟಪೂರ್ವ ಜಿಲ್ಲಾಧ್ಯಕ್ಷ ಗೋಪಾಲ್ ಗೌಡ ಎತ್ತಲ್ ಗುಡ್ಡೆ ಮತ್ತು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಾಧು ಗೌಡ ನಾರ್ಜೆ ಹಾಗೂ ಆಡಳಿತ ಮಂಡಳಿ ಸದಸ್ಯರು ನೂತನ ಆಡಳಿತ ಮಂಡಳಿಗೆ ಸಂಘದ ಕಡತಗಳನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. […]